ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೋರ್ವ ಬೀಡಿ ಬ್ರಾಂಚ್ ನಿಂದ ಮರಳುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಳಿಯ ಮರುವಾಳ ಎಂಬಲ್ಲಿ ನಡೆದಿದೆ.
ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಥಾಮಸ್ ರೆಬೆಲ್ಲೋ ಅವರ ಪತ್ನಿ ಮಿನೇಜಸ್ ದೂರುದಾರರು.
ಸೆ.22ರಂದು ಮಧ್ಯಾಹ್ನ 'ನಾನು ಬೀಡಿ ಕೊಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ ದ್ವಿಚಕ್ರವಾಹನದಲ್ಲಿ ಬಂದ ವ್ಯಕ್ತಿಯೋರ್ವ ನನ್ನ ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಚಿನ್ನದ ಕರಿಮಣಿ ಸರ ಎಳೆದು ಪರಾರಿಯಾಗಿದ್ದಾನೆ' ಎಂದು ಅವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
22/09/2020 09:05 pm