ಪುತ್ತೂರು: ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ತೆರಳಿದ್ದಾಕೆ ಗುಡ್ಡದಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರು ಘಟನೆ ಪುತ್ತೂರಿನಲ್ಲಿ ನಡೆದಿದೆ.
ನೇಣು ಬಿಗಿದುಕೊಂಡ ವಿದ್ಯಾರ್ಥಿನಿಯನ್ನು ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ದಿವ್ಯಾ (14) ಎಂದು ಗುರುತಿಸಲಾಗಿದೆ.
ಈಕೆ ತನ್ನ ಶಾಲೆಯಲ್ಲಿ ವಿದ್ಯಾಗಮಕ್ಕೆ ಹಾಜರಾಗಲು ಮನೆಯಿಂದ ಹೊರಟಿದ್ದಳು. ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಹಿಂತಿರುಗದೇ ಇದ್ದುದನ್ನು ಗಮನಿಸಿದ ಮನೆ ಮಂದಿ ಶಾಲೆಯಲ್ಲಿ ವಿಚಾರಿಸಿದಾಗ ಆಕೆ ಶಾಲೆಗೆ ಹೋಗದೇ ಇರುವುದು ತಿಳಿದಿದೆ.
ಬಳಿಕ ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ ಆಕೆಯ ದೇಹವು ಗುಡ್ಡದಲ್ಲಿರುವ ಗೇರು ಬೀಜದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Kshetra Samachara
02/01/2021 01:29 pm