ಮಂಗಳೂರು: ಧಾರ್ಮಿಕ ಭಾವನೆಗಳಿಗೆ ಚ್ಯುತಿ ತರುವಂತಹ ಕೃತ್ಯಗಳನ್ನು ಸಹಿಸುವುದು ಸಾಧ್ಯವಿಲ್ಲ. ಪವಿತ್ರ ಕ್ಷೇತ್ರಗಳ ಪಾವಿತ್ರ್ಯತೆಯನ್ನು ಉದ್ದೇಶ ಪೂರ್ವಕವಾಗಿ ಹಾಳುಗೈಯಲು ತೊಡಗಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಇತ್ತೀಚೆಗೆ ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ಹಾಕಿರುವ ನಕಲಿ ನೋಟಿನಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಬರೆದು ಹಾಕಿರುವಂತಹ ಕುಕೃತ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಖಂಡಿಸಿ, ಮಾತನಾಡಿದರು.
ನಕಲಿ ನೋಟುಗಳ ಮೇಲೆ ಹಿಂದೂ ದೈವ-ದೇವರ ಕುರಿತ ನಿಂದನೆಯ ಬರಹದಿಂದ ಸಮಾಜಕ್ಕೆ ಅತಿ ನೋವುಂಟಾಗಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
Kshetra Samachara
03/01/2021 10:45 pm