ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಮೇಗಿನಪೇಟೆಯಲ್ಲಿ ಕಿಡಿಗೇಡಿಗಳಿಂದ ಎಸ್ ಡಿಪಿಐ ಕಚೇರಿಗೆ ಬೆಂಕಿ

ಬಂಟ್ವಾಳ: ವಿಟ್ಲ ವಲಯ ಎಸ್ ಡಿಪಿಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.

ಸೋಮವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಿಗಳು ಪತ್ತೆಯಾಗಿದೆ.

ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ ಡಿಪಿಐ ಮುಖಂಡ ಕಲಂದರ್ ಪರ್ತಿಪ್ಪಾಡಿ ಹಾಗೂ ಶಾಕೀರ್ ಅಳಕೆಮಜಲು ಅವರು, ಗ್ರಾಪಂ ಚುನಾವಣೆಯಲ್ಲಿ ಎಸ್ ಡಿಪಿಐ ಬೆಂಬಲಿತರು ಅಭೂತಪೂರ್ವ ಗೆಲುವು ಸಾಧಿಸಿದ್ದರು.

ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಪಕ್ಷದ ವರ್ಚಸ್ಸು ಕುಗ್ಗಿಸುವ ಕಾರ್ಯ ನಡೆಸಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ.

ತಕ್ಷಣವೇ ಆರೋಪಿಗಳನ್ನು ಪೊಲೀಸರು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

04/01/2021 10:12 am

Cinque Terre

18.74 K

Cinque Terre

0

ಸಂಬಂಧಿತ ಸುದ್ದಿ