ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸುಳ್ಯ: ಖಾಸಗಿ ಸಂಸ್ಥೆ ಉದ್ಯೋಗಿ ಪ್ರಮೋದ್ ಎಂಬವರು ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರ ಮೃತದೇಹ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಾಣೆಯಾದ ದಿನದಿಂದ ಮನೆಯವರು ಹುಡುಕಾಟ ನಡೆಸಿದಾಗ, ಪ್ರಮೋದ್ ಅವರ ಬೈಕ್ ಮನೆ ಪಕ್ಕದಲ್ಲಿ ಪತ್ತೆಯಾಗಿತ್ತು. ಆದರೆ, ಪ್ರಮೋದ್ ಅವರ ಸುಳಿವು ಸಿಕ್ಕಿರಲಿಲ್ಲ. ಪಕ್ಕದ ಕಾಡು ಸೇರಿದಂತೆ ಹಲವೆಡೆ ಮನೆಯವರು, ಸ್ಥಳೀಯರು ಸೇರಿ ಹುಡುಕಾಟ ನಡೆಸಲಾಗಿತ್ತಾದರೂ ಅವರ ಪತ್ತೆಯಾಗಿರಲಿಲ್ಲ.

ಇಂದು ಬೆಳಿಗ್ಗೆ ಮತ್ತೆ ಹುಡುಕಾಟ ನಡೆಸಿದಾಗ ಅವರು ಬೈಕ್ ನಿಲ್ಲಿಸಿದ ಸ್ವಲ್ಪ ದೂರದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿದೆ. ಹೀಗಾಗಿ ನಾಪತ್ತೆಯಾದ ದಿನವೇ ಪ್ರಮೋದ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

09/01/2021 08:57 pm

Cinque Terre

16.47 K

Cinque Terre

1

ಸಂಬಂಧಿತ ಸುದ್ದಿ