ಕೊಣಾಜೆ : ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದಾರೆ ಎಂದು ಆರೋಪದಲ್ಲಿ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮುಡಿಪು ಸಮೀಪ ಮಂಗಳವಾರ ಸಂಜೆ ನಡೆದಿದೆ.
ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಆಗಮಿಸಿ ಲಾರಿ ವಶಪಡಿಸಿಕೊಂಡಿದ್ದಾರೆ.
ವೈದ್ಯರ ಅನುಮತಿ ಪತ್ರ ಪಡೆದು ಸಾಗಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಕೊಣಾಜೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Kshetra Samachara
13/01/2021 12:05 pm