ಮಂಗಳೂರು: ಬಸ್‌ನಲ್ಲಿ ಕಿಡಿಗೇಡಿಯೊಬ್ಬ ತನ್ನ ಮೈಯನ್ನು ಮುಟ್ಟಿ ಕಿರುಕುಳ ನೀಡಿದರೂ ಖಾಸಗಿ ಬಸ್ಸಿನ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದರಿಂದ ನೊಂದ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ನೋವು ತೋಡಿಕೊಂಡಿದ್ದಾರೆ.
ಯುವತಿಯ ಜಾಲತಾಣದ ಪೋಸ್ಟ್ ಈಗ ವೈರಲ್ ಆಗಿದ್ದು, ಆರೋಪಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜನವರಿ 14ರಂದು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಬಸ್ ನಿಲ್ದಾಣದಿಂದ ಖಾಸಗಿ ಬಸ್ಸಿನಲ್ಲಿ ಮಂಗಳೂರಿನ ಪಂಪ್ ವೆಲ್ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಕಿರುಕುಳಕ್ಕೆ ಒಳಗಾದ ಮುಸ್ಲಿಂ ಹುಡುಗಿ ತನ್ನ ಇನ್ ಸ್ಟಾ ಗ್ರಾಮ್ ಖಾತೆಯಲ್ಲಿ ಯುವಕನ ಕುಕೃತ್ಯದ ಬಗ್ಗೆ ಬರೆದುಕೊಂಡಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಜನವರಿ 15ರ ಸಂಜೆ ವೇಳೆಗೆ ಈ ಪೋಸ್ಟ್ 43 ಸಾವಿರಕ್ಕೂ ಹೆಚ್ಚು ಷೇರ್ ಆಗಿದ್ದು, 1500ರಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. ಯುವತಿಯ ಧೈರ್ಯದ ಬಗ್ಗೆ ಮೆಚ್ಚುಗೆಯೂ ವ್ಯಕ್ತವಾಗಿದೆ.
Kshetra Samachara
15/01/2021 08:27 pm