ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿ.ಸಿ.ರೋಡ್‌: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಐವರು ಮಹಿಳೆಯರ ರಕ್ಷಣೆ, ಮೂವರು ಅರೆಸ್ಟ್

ಬಂಟ್ವಾಳ: ಬಿ.ಸಿ.ರೋಡ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರವ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಬಂಟ್ವಾಳ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಪುತ್ತೂರು ನೆಕ್ಕಿಲಾಡಿ ನಿವಾಸಿ ಶರಣ್(28), ಬಂಟ್ವಾಳ ಕರಿಯಂಗಳ ನಿವಾಸಿ ಭರತ್‌(28) ಹಾಗೂ ಪುತ್ತೂರು ಚಿಕ್ಕಮೂಡ್ನೂರು ಗ್ರಾಮ ನಿವಾಸಿ ಕಿರಣ್ ಕೆ.(25) ಬಂಧಿತರು. ಆರೋಪಿಗಳು ಕೃತ್ಯಕ್ಕೆ ಬಳಸಿದ 4,400 ರೂ. ಹಾಗೂ ಇತರ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿ.ಸಿ.ರೋಡ್‌ನ ಭಾರತ್‌ ಕಾಂಪ್ಲೆಕ್ಸ್‌ನ ತಳಭಾಗದಲ್ಲಿರುವ ಕೊಠಡಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್‌ ಅವರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್‌ ತಂಡವನ್ನು ರಚಿಸಿ ಭಾನುವಾರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

18/01/2021 10:18 am

Cinque Terre

11.63 K

Cinque Terre

1

ಸಂಬಂಧಿತ ಸುದ್ದಿ