ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಒಬ್ಬನನ್ನು ಮಂಗಳೂರಿನ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣೆ ಪೊಲೀಸರು ನಗರದ ಪಂಪ್ ವೆಲ್ ಬಳಿ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಮುರ ನಿವಾಸಿ ಪ್ರಸ್ತುತ ಮಂಗಳೂರಿನ ಜೆಪ್ಪು ಬಪ್ಪಾಲ್ ನಲ್ಲಿ ವಾಸವಾಗಿರುವ ಎಂ.ಸೈಯದ್ ನಯೀಮ್ (27) ಬಂಧಿತ ಆರೋಪಿ. ಈತ ನಗರದ ಪಂಪ್ವೆಲ್ ಸಭಾಂಗಣವೊಂದರ ಮುಂಭಾಗ ಗಾಂಜಾ ಸೇವನೆ ಮಾಡುತ್ತಿದ್ದಾನೆ ಎಂದು ಮಾಹಿತಿ ಪಡೆದ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣೆಯ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈತನನ್ನು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
20/01/2021 01:54 pm