ಮಂಗಳೂರು: ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಸಿದ್ದೀಕ್ ಬಂಧಿತ ಆರೋಪಿ. ಸಿದ್ದೀಕ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ತನಗೆ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದೂರು ದಾಖಲಿಸಿದ್ದರು. ಆರೋಪಿ ತನ್ನ ಮೇಲೆ ಲೈಂಗಿಕ ಕಿರುಕುಳ ಸಹಿತ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆ ಮರೆಸಿಕೊಂಡಿದ್ದ. ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Kshetra Samachara
23/01/2021 05:05 pm