ಮಂಗಳೂರು: ಅಕ್ರಮ ಸಾಗಾಟದ 30 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು, ಓರ್ವನನ್ನು ವಶಪಡಿಸಿಕೊಂಡಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ನಿವಾಸಿ ಮಶ್ಕೂರ್ ಕಲ್ಲಾರ್ ಬಂಧಿತ ಆರೋಪಿ.
ಆರೋಪಿ ಮಶ್ಕೂರ್ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಈತನನ್ನು ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಆರೋಪಿ ಮಶ್ಕೂರ್ ನಿಂದ 30 ಲಕ್ಷ ರೂ. ಮೌಲ್ಯದ 587 ಗ್ರಾಂ ಶುದ್ಧ ಚಿನ್ನವನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
Kshetra Samachara
31/01/2021 11:15 am