ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಿಸಿಬಿ ಪೊಲೀಸರಿಂದ ಆರೋಪಿಗಳ ಕಾರು ಮಾರಾಟ ಆರೋಪ: ಆಂತರಿಕ ತನಿಖೆಗೆ ಸೂಚನೆ

ಮಂಗಳೂರು: ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಆಂತರಿಕ ತನಿಖೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಜವಾಬ್ದಾರಿ ಹೊರಿಸಲಾಗಿದೆ.

ಐಷಾರಾಮಿ ಕಾರು ಮಾರಾಟದ ಮಾಡಿದ ಆರೋಪವು ಬೆಳಕಿಗೆ ಬರುತ್ತಿದ್ದಂತೆಯೇ ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಈ ಪ್ರಕರಣವನ್ನು ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೊದಲ ಹಂತದ ವರದಿಯನ್ನು ಮೂರು ದಿನದೊಳಗೆ ನೀಡಿ ಬಳಿಕ ಕಮಿಷನರ್ ಅವರ ಮಾರ್ಗದರ್ಶನದಂತೆ ಪ್ರಕರಣದ ಹೆಚ್ಚುವರಿ ವರದಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Edited By : Nagaraj Tulugeri
Kshetra Samachara

Kshetra Samachara

04/02/2021 10:57 pm

Cinque Terre

15.09 K

Cinque Terre

0

ಸಂಬಂಧಿತ ಸುದ್ದಿ