ಮಂಗಳೂರು: ನಗರದ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5.84 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ.
ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ತಪಾಸಣೆ ವೇಳೆ ಕಾಲಿನಡಿ ಇಟ್ಟು ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅಲ್ಲದೆ, ಅವರು ಕಾಸ್ಮೆಟಿಕ್ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳಿಂದ 5.84 ಲಕ್ಷ ರೂ. ಮೌಲ್ಯದ 120.38 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಬಂಧಿತ ಪ್ರಯಾಣಿಕರಿಂದ 1.71 ಲಕ್ಷ ರೂ. ಮೌಲ್ಯದ ಕಾಸ್ಮೆಟಿಕ್ ವಸ್ತುಗಳನ್ನು ಕೂಡ ಸ್ವಾಧೀನಪಡಿಸಿಕೊಂಡಿದ್ದಾರೆ.
Kshetra Samachara
05/02/2021 10:42 pm