ಮಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 31.73 ಲಕ್ಷ ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಓರ್ವ ನನ್ನು ಬಂಧಿಸಿದ್ದಾರೆ.
ನಗರದ ಕಸಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಅರ್ಷದ್ ಬಂಧಿತನಾಗಿದ್ದು, ಈತ ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈತನ ಬಳಿ ಅಕ್ರಮ ಸಾಗಾಟದ ಗಮ್ ನಿಂದ ಮಿಶ್ರಣ ಮಾಡಿರುವ 31,73,920 ರೂ. ಮೌಲ್ಯದ 664 ಗ್ರಾಂ ಚಿನ್ನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/02/2021 08:21 pm