ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಸೇವನೆ ಮಾಡಿರುವ ಆರೋಪದಲ್ಲಿ ಕೇವಲ ಐದೇ ದಿನಗಳಲ್ಲಿ 72 ಪ್ರಕರಣಗಳು ದಾಖಲಾಗಿದ್ದು, 10 ಮಂದಿಯನ್ನು ಬಂಧಿಸಲಾಗಿದೆ.
ಉಳ್ಳಾಲ ಠಾಣೆಯಲ್ಲಿ 9 ಪ್ರಕರಣಗಳು ದಾಖಲಾಗಿದ್ದು, ಪಣಂಬೂರು ಠಾಣೆಯಲ್ಲಿ ಎಂಟು, ಸುರತ್ಕಲ್ ಹಾಗೂ ಕಂಕನಾಡಿ ಠಾಣೆಗಳಲ್ಲಿ ತಲಾ ಏಳು, ಮಂಗಳೂರು ಉತ್ತರ (ಬಂದರ್), ಪೂರ್ವ (ಕದ್ರಿ) ಠಾಣೆಯಲ್ಲಿ ತಲಾ ಆರು, ಮಂಗಳೂರು ಗ್ರಾಮಾಂತರ, ಮೂಡುಬಿದಿರೆ ತಲಾ ಐದು, ಮಂಗಳೂರು ದಕ್ಷಿಣ (ಪಾಂಡೇಶ್ವರ), ಮುಲ್ಕಿಯಲ್ಲಿ ತಲಾ ನಾಲ್ಕು, ಉರ್ವ ಠಾಣೆಯಲ್ಲಿ ಮೂರು, ಬರ್ಕೆ ಎರಡು, ಕೊಣಾಜೆ, ಕಾವೂರು, ಬಜಪೆ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿವೆ.
ಒಟ್ಟು ಪ್ರಕರಣಗಳಲ್ಲಿ 3 ಕೆ.ಜಿ. 688 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದು, 2.15 ಗ್ರಾಂನ ಎಂಡಿಎಂಎ ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಾದಕ ದ್ರವ್ಯ ನಿರ್ಮೂಲನೆ ಮಾಡಲು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
Kshetra Samachara
08/02/2021 08:55 pm