ಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬಿಜೈನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನೀಕ್ಷಿತ್ ಪೂಜಾರಿ (22) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ ಆರೋಪಿ ಗಾಂಜಾ ಸೇವನೆ ಮಾಡುತಿದ್ದ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದು ಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲೂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಕರ್ನಕಟ್ಟೆ ಮೇಲ್ಸೇತುವೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಸಿದ್ಧಿಕ್ (26) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಾದಕ ವಸ್ತುವನ್ನು ಸೇವನೆ ಮಾಡಿ ನಶೆಯಲ್ಲಿ ಜೋರಾಗಿ ಮಾತನಾಡುತ್ತಾ, ಕಿರುಚಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನಂತೆ ಸ್ಥಳಕ್ಕೆ ದಾವಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು.
ಬಳಿಕ ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
Kshetra Samachara
12/02/2021 10:24 am