ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೊಕೇನ್ ಮಾರಾಟ ಯತ್ನ; ಆರೋಪಿ ಬಂಧನ

ಮಂಗಳೂರು: ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಮಾದಕ ದ್ರವ್ಯ ಕೊಕೇನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಇಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೋಳಾರದ ಸುಪ್ರೀತ್ (35) ಬಂಧಿತ ಆರೋಪಿಯಾಗಿದ್ದು, ಈತನಿಂದ ಪೊಲೀಸರು 2 ಲಕ್ಷ ಮೌಲ್ಯದ 21.13 ಗ್ರಾಂ ಕೊಕೇನ್, 35 ಸಾವಿರ ರೂ. ಮೌಲ್ಯದ 2 ಮೊಬೈಲ್, 2 ಸಾವಿರ ರೂ. ನಗದು ಸೇರಿ ಒಟ್ಟು 2.37 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪಾಂಡೇಶ್ವರದ ಇಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಅಪರಾಧ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Edited By : Nirmala Aralikatti
Kshetra Samachara

Kshetra Samachara

13/02/2021 10:57 pm

Cinque Terre

13.62 K

Cinque Terre

0

ಸಂಬಂಧಿತ ಸುದ್ದಿ