ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಕೈಕಂಬ ಕೋಟೆಸಾರು ನದಿಯಲ್ಲಿ ಮಹಿಳೆಯ ಶವ ಪತ್ತೆ

ಕಡಬ: ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿನ ಕೋಟೆಸಾರು ನದಿಯಲ್ಲಿ ಸುಮಾರು 65ರಿಂದ 70ರ ಹರೆಯದ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಸಮೀಪ ಚಪ್ಪಲಿ ಹಾಗೂ ಕೈಯಲ್ಲಿ ಕನ್ನಡಕ ಇದೆ. ಮೃತರು ಯಾರು ಎಂಬುದು ಪತ್ತೆಯಾಗದ ಹಿನ್ನೆಲೆಯಲ್ಲಿ ದೇಹವನ್ನು ಮಂಗಳೂರಿನ ದೇರಳಕಟ್ಟೆಯ ಮೆಡಿಕಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

ಕಡಬ ಠಾಣೆಯ ಎಸ್ಐ ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ನದಿಗೆ ಇಳಿದು ಮೃತದೇಹವನ್ನು ಮೇಲಕ್ಕೆ ಎತ್ತಿದರು. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

23/02/2021 02:34 pm

Cinque Terre

12.49 K

Cinque Terre

0

ಸಂಬಂಧಿತ ಸುದ್ದಿ