ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲಾಗುತ್ತಿದ್ದ ಎರಡು ಪ್ರಕರಣಗಳನ್ನು ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು, 61 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಈ ಎರಡೂ ಪ್ರಕರಣಗಳಲ್ಲಿ ಕೇರಳದ ಕಾಸರಗೋಡಿನ ಅಬ್ದುಲ್ ರಶೀದ್ ಮತ್ತು ಅಬ್ದುಲ್ ನಿಶಾದ್ ಎಂಬ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಅಬ್ದುಲ್ ರಶೀದ್ನನ್ನು ಫೆ. 23ರಂದು ವಿಮಾನ ನಿಲ್ದಾಣದ ಶೌಚಾಲಯದ ಬಳಿಯಿಂದ ವಶಕ್ಕೆ ಪಡೆದಾಗ, ಆತ ಬಟ್ಟೆಯಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆತನಿಂದ 30,75,160 ರೂ. ಮೌಲ್ಯದ 638 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಫೆ. 24ರಂದು ಕಾಸರಗೋಡು ಜಿಲ್ಲೆಯ ಅಬ್ದುಲ್ ನಿಶಾದ್ ಎಮರ್ಜೆನ್ಸಿ ಲೈಟ್ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 30,26,933 ರೂ. ಮೌಲ್ಯದ 629 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
Kshetra Samachara
25/02/2021 07:48 pm