ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಯುವಕನನ್ನು ಸ್ಥಳೀಯ ನಿವಾಸಿ ಅಭಿಲಾಶ್ ದಾಸ್ (29) ಎಂದು ಗುರುತಿಸಲಾಗಿದೆ. ಈತ ಕೂಲಿ ಕೆಲಸ ಮಾಡಿಕೊಂಡಿದ್ದು, ಶುಕ್ರವಾರ ಮಧ್ಯಾಹ್ನ ಏಕಾಏಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಳಗಿನ ಕೋಣೆಯ ಪಕ್ಕಾಸಿಗೆ ನೈಲಾನ್ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಅಭಿಲಾಶ್ ತಂದೆ ರಿಕ್ಷಾ ಚಾಲಕರಾಗಿದ್ದು, ಮೂವರು ಮಕ್ಕಳಲ್ಲಿ ಕೊನೆಯವನಾಗಿದ್ದ ಅಭಿಲಾಶ್ ಮದ್ಯವ್ಯಸನಿಯಾಗಿದ್ದ. ಕಳೆದ ಕೆಲ ದಿನಗಳ ಹಿಂದೆ ತನ್ನ ತಾಯಿ ಪರ್ಕಳಕ್ಕೆ ಹೋಗಿದ್ದಾರೆ, ತಂದೆ ರಿಕ್ಷಾದಲ್ಲಿ ಹೋಗಿದ್ದಾರೆ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಪಂಚಾಯಿತಿ ಸದಸ್ಯ ಕೃಷ್ಣ ಅಂಗರಗುಡ್ಡೆ ಹಾಗೂ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
26/02/2021 05:28 pm