ಮುಲ್ಕಿ: ಮುಲ್ಕಿ ಸಮೀಪದ ಕೆ.ಎಸ್ ರಾವ್ ನಗರದ ಲಿಂಗಪ್ಪಯ್ಯಕಾಡಿನಲ್ಲಿ ನಡೆದ ದೀಪಾವಳಿ ಹಬ್ಬದ ಲಕ್ಷ್ಮಿಪೂಜೆ ಕಾರ್ಯಕ್ರಮಕ್ಕೆ ಎಸಿಪಿ ಮಹೇಶ್ ಕುಮಾರ್ ಆಗಮಿಸಿ ಪ್ರಸಾದ ಸ್ವೀಕರಿಸಿದರು.
ಧಾರ್ಮಿಕ ಸಭೆಯಲ್ಲಿ ಎಸಿಪಿ ಮಹೇಶ್ ಕುಮಾರ್ ಮಾತನಾಡಿ, ಕಾನೂನು ರಕ್ಷಣೆಗೆ ಸಾರ್ವಜನಿಕರ ಸಹಕಾರ ಅತೀ ಮುಖ್ಯವಾಗಿದ್ದು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಜೊತೆಗೆ ಮನೆಯ ಪರಿಸರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಮನವಿ ಮಾಡಿದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ ಆಶೀರ್ವಚನ ನೀಡಿದರು. ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆಯ ದ.ಕ ಜಿಲ್ಲಾ ಅಧ್ಯಕ್ಷರಾದ ಇಕ್ಬಾಲ್, ಮುಲ್ಕಿ-ಮೂಡಬಿದಿರೆ ಅಧ್ಯಕ್ಷ ಸಂತೋಷ್ ದೇಸುಣಗಿ, ಯೂತ್ ಅಧ್ಯಕ್ಷ ಪ್ರಶಾಂತ್. ಕೃಷ್ಣ ಪವಾರ್
ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/11/2021 10:18 pm