ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ನವ ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ವಿವಾಹಿತ ಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವರದಿಯಾಗಿದೆ.

ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಪುತ್ರಿ ಆಯೀಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವತಿ.

ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಯುವತಿ ಮೃತಪಟ್ಟಿದ್ದಾರೆಂದು ತಿಳಿಸಿದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Edited By :
Kshetra Samachara

Kshetra Samachara

07/05/2022 01:50 pm

Cinque Terre

3.54 K

Cinque Terre

0

ಸಂಬಂಧಿತ ಸುದ್ದಿ