ಮಂಗಳೂರು: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಧ್ರಾ ಪಿ.ಪಿ.(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಆತ್ಮಹತ್ಯೆಗೈದಿರುವ ವಿದ್ಯಾರ್ಥಿನಿ ಸಾಂಧ್ರಾ ಪಿ.ಪಿ. ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ತೃತೀಯ ವರ್ಷದ ವಿದ್ಯಾರ್ಥಿನಿ. ಈಕೆ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರ ಮಧ್ಯೆ ಕಾಲೇಜಿಗೆ ಸೇರಿದ್ದ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿರುವ ಸಾಂಧ್ರಾ ಪಿ.ಪಿ. ಕಳೆದ ಒಂದು ವರ್ಷಗಳಿಂದ ಖಿನ್ನತೆಯಲ್ಲಿ ಬಳಲುತ್ತಿದ್ದರು. ಈ ಹಿಂದೆಯೂ ಒಮ್ಮೆ ಆಕೆ ಆತ್ಮಹತ್ಯೆ ಯತ್ನ ಮಾಡಿದ್ದಳೆಂದು ಪೊಲೀಸರು ತಿಳಿಸಿದ್ದಾರೆ.
Kshetra Samachara
11/05/2022 09:27 pm