ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪದ್ಮನೂರು ಬಳಿ ಕಳೆದ ಜನವರಿ 17ರಂದು ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮುಲ್ಕಿ ಸಮೀಪದ ಕೆರೆಕಾಡು ಬೆಳ್ಳಾಯರು ನಿವಾಸಿ ಶಾಂತಿ ಪೂಜಾರಿ (34) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ತೀರಾ ಬಡಕುಟುಂಬದಲ್ಲಿ ಜೀವನ ಸಾಗಿಸುತ್ತಿದ್ದ ಶಾಂತಿ ಯವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಆಗಲಿದ್ದಾರೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
13/05/2022 03:11 pm