ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಪ್ರತ್ಯೇಕ ಪ್ರಕರಣ: ನಾಲ್ವರ ಬಂಧನ!

ಬಂಟ್ವಾಳ: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ನಂದಾವರ ಜಂಕ್ಷನ್ ನಲ್ಲಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪಿಗಳಾದ ನಂದಾವರದ ಮೊಹಮ್ಮದ್ ಇಮ್ತಿಯಾಜ್ (37), ಉಬೈದ್ (34) ಎಂಬಿಬ್ಬರನ್ನು ನಗರ ಠಾಣಾ ಎಸ್ಸೈ ಅವಿನಾಶ್ ಗೌಡ ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.

ನಂದಾವರ ಜಂಕ್ಷನ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಬಂದ ಮಾಹಿತಿಯಂತೆ ವಿಚಾರಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಖಚಿತಗೊಂಡಿದ್ದು, ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಹರೀಶ್ ನೇತೃತ್ವದ ತಂಡ ಸಜಿಪನಡು ಕೋಟೆಕಣಿ ಎಂಬಲ್ಲಿ ಬಂಧಿಸಿದೆ.

ಸಜಿಪನಡು ಕೋಟೆಕಣಿ ಜಂಕ್ಷನ್ ನಲ್ಲಿ ಇಬ್ಬರು ವ್ಯಕ್ತಿಗಳು ಯಾವುದೋ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಕುರಿತು ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಹರೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಮಹಮ್ಮದ್ ಶಮೀರ್ (26), ಮಹಮ್ಮದ್ ಅಫ್ಸಾನ್ (25) ಬಂಧಿತರು. ಇವರಿಬ್ಬರೂ ನಶೆ ಬರುವ ವಸ್ತುವನ್ನು ಸೇವಿಸಿ ತೂರಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದವರನ್ನು ಕಂಡು ವಿಚಾರಿಸಲಾಗಿ ಇಬ್ಬರು ನಶೆಯ ಅಮಲಿನಲ್ಲಿ ಉತ್ತರಿಸುತ್ತಿದ್ದು, ಮತ್ತೆ ವಿಚಾರಿಸಿದಾಗ ಗಾಂಜಾ ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Edited By :
Kshetra Samachara

Kshetra Samachara

24/05/2022 09:56 am

Cinque Terre

5.76 K

Cinque Terre

1

ಸಂಬಂಧಿತ ಸುದ್ದಿ