ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಾರ್ಮಿಕ ಸಚಿವಾಲಯದ ಅಧಿಕಾರಿ ಎಸಿಬಿ ಬಲೆಗೆ

ಮಂಗಳೂರು: ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ಮನಪಾ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಎರಡು ದಿನದಲ್ಲಿಯೇ ಕಾರ್ಮಿಕ ಸಚಿವಾಲಯದ ಅಧಿಕಾರಿಯೋರ್ವರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನ ಬೈಕಂಪಾಡಿಯಲ್ಲಿರುವ ಕಾರ್ಮಿಕ ಸಚಿವಾಲಯದ ಕಚೇರಿಯಲ್ಲಿ ಅಧಿಕಾರಿ ಕೃಷ್ಣಮೂರ್ತಿ ಭಟ್ ಲಂಚ ಸ್ವೀಕರಿಸಿದ ‌ಆರೋಪ ಕೇಳಿ ಬಂದಿದೆ. ತಕ್ಷಣ ಎಸಿಬಿ ದಾಳಿ ನಡೆಸಿ, ಅಧಿಕಾರಿಯನ್ನು ಎಸಿಬಿ ಅಧಿಕಾರಿಗಳ ತಂಡ ವಶಕ್ಕೆ ತೆಗೆದುಕೊಂಡಿದೆ. ಆರೋಪಿ 2,000 ರೂ. ಲಂಚ ಸ್ವೀಕರಿಸಿರುವ ಆರೋಪ ಕೇಳಿ ಬಂದಿದೆ.

Edited By :
Kshetra Samachara

Kshetra Samachara

04/06/2022 07:21 pm

Cinque Terre

5.22 K

Cinque Terre

0

ಸಂಬಂಧಿತ ಸುದ್ದಿ