ಮಂಗಳೂರು: ನಗರದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32.72 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಫ್ಲೈಟ್ ಮೂಲಕ ಮಂಗಳೂರು ಏರ್ಪೋರ್ಟ್ಗೆ ಕಾಸರಗೋಡು ಮೂಲದ ಪ್ರಯಾಣಿಕ ಆಗಮಿಸಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಅನುಮಾನ ಬಂದು ತಪಾಸಣೆ ನಡೆಸಿದ್ದಾರೆ.
ಈ ವೇಳೆ ಈತ ಬಾಕ್ಸ್ನೊಳಗೆ ಚಿನ್ನವನ್ನು ಪೌಡರ್ ರೂಪದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಈ ಚಿನ್ನ ಸಹಿತ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. 24 ಕ್ಯಾರೆಟ್ನ 624 ಗ್ರಾಂ ತೂಕದ 32,72,880 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
Kshetra Samachara
05/06/2022 09:38 am