ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟಕ್ಕಾಗಿ ಹಣವನ್ನು ಸಂಗ್ರಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮುಲ್ಕಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ಪಕ್ಷಿಕೆರೆ ಕೊಯಿಕುಡೆ ಕಾಪಿಕಾಡು ಮನೆ ನಿವಾಸಿ ಶ್ರೀನಿವಾಸ (50) ಎಂದು ಗುರುತಿಸಲಾಗಿದೆ.
ಆರೋಪಿ ಶ್ರೀನಿವಾಸ ಮಟ್ಕಾ ಜೂಜಾಟಕ್ಕೆ ಚೀಟಿ ಬರೆಯುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವುದು ಕಂಡು ಬಂದಿದ್ದು, ಮಟ್ಕಾ ಜೂಜಾಟಕ್ಕೆ ಸಂಗ್ರಹಿಸಿದ ನಗದು ಹಣ 1400ರೂ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Kshetra Samachara
08/06/2022 08:30 pm