ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 8 ಆರೋಪಿಗಳು, 2 ಪಿಕ್‌ಅಪ್ ವಾಹನಗಳು ವಶಕ್ಕೆ

ಉಳ್ಳಾಲ: ಉಳ್ಳಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ತಲಪಾಡಿ ನಿವಾಸಿಗಳಾದ ರಿಯಾಝ್(26), ಅಬೂಬಕ್ಕರ್(53), ರಘುನಾಥ(40), ರಾಜೇಶ್(50), ಮುತ್ತಲಿಬ್(40) ಹಾಗೂ ಉತ್ತರ ಪ್ರದೇಶದ ವಲಸೆ ಕಾರ್ಮಿಕರಾದ ಅತುಲ್(22), ರಾಮಧಾರಿ(28), ಪಂಕಜ್(24) ಬಂಧಿತ ಆರೋಪಿಗಳು.

ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಮರಳುಗಳವು ಎಗ್ಗಿಲ್ಲದೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನು ಅಳವಡಿಕೆ ಮಾಡಲಾಗಿತ್ತು. ಇದಕ್ಕೆ ಬ್ರೇಕ್ ಹಾಕಲು ಅಳವಡಿಸಿರುವ ಸಿಸಿಟಿವಿ ಮತ್ತು ತಂತಿ ತಡೆಬೇಲಿಯನ್ನು ಸೆ.10ರ ನಸುಕಿನ ವೇಳೆ ಧ್ವಂಸಗೈಯ್ಯಲಾಗಿತ್ತು. ಸೋಮೇಶ್ವರ ದೇವಸ್ಥಾನದ ರಥ‌ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಇದಾಗಿದ್ದು, ಟಿಪ್ಪರ್ ಹಿಮ್ಮುಖವಾಗಿ ಚಲಾಯಿಸಿ ಧ್ವಂಸ‌ಗೈಯ್ಯಲಾಗಿದೆ. ಅದಕ್ಕೂ ಮುನ್ನ ಮುಖಕ್ಕೆ ಬಟ್ಟೆ ಕಟ್ಟಿ ಹಾನಿಗೈಯಲು ವಿಫಲ ಯತ್ನ ನಡೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಅಕ್ರಮ ಮರುಳು ದಂಧೆ ನಡೆಸುತ್ತಿದ್ದ, ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎಂಟು ಮಂದಿಯನ್ನು ಬಂಧಿಸಿ ಎರಡು ಪಿಕ್ ಅಪ್ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

17/09/2022 05:29 pm

Cinque Terre

3.13 K

Cinque Terre

2

ಸಂಬಂಧಿತ ಸುದ್ದಿ