ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಪಿಯುಸಿ ವಿದ್ಯಾರ್ಥಿಗಳಿಬ್ಬರಿಂದ ಚೂರಿ ಇರಿತ...!

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಾಯಗೊಳಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತೂರು ಪದವು ಬಳಿಯ ನಿಟ್ಟೆ ಪಿಯು ಕಾಲೇಜಿನ ಪ್ರಥಮ ಪಿಯುನಲ್ಲಿ ವ್ಯಾಸಾಂಗ ಮಾಡುತ್ತಿರುವ 17 ವರ್ಷದ ವಿದ್ಯಾರ್ಥಿಗೆ ಪದವು ಪಿಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಬ್ಬರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಪದುವಾ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಅದೇ ಕಾಲೇಜಿನ ವಿದ್ಯಾರ್ಥಿಗೆ ಬೆದರಿಕೆ ಹಾಕಿತ್ತು. ಈ ವಿಚಾರವಾಗಿ ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿ ತನ್ನ ಗೆಳೆಯರೊಂದಿಗೆ ಸಮಾಧಾನ ಮಾಡಲು ಹೋಗಿದ್ದ.

ಈ ವಿಚಾರವಾಗಿ ಕೋಪಗೊಂಡ ಆರೋಪಿತ ವಿದ್ಯಾರ್ಥಿಗಳು ಆತನನ್ನು ನಂತೂರು ಜಂಕ್ಷನ್ ಬಳಿಯಿರುವ ಬಬ್ಬುಸ್ವಾಮಿ ದೇವಸ್ಥಾನದ ಹಿಂಬದಿಗೆ ಕರೆದೊಯ್ದು ಚೂರಿಯಿಂದ ಇರಿದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಮಾಡಿರುವ ಪಿಯುಸಿ ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಠಾಣೆಗೆ ಕರೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಸಂಘರ್ಷಕ್ಕೊಳಾಗದ ಬಾಲಕರ ವಿರುದ್ಧ ಬಾಲ ನ್ಯಾಯ ಮಂಡಳಿಗೆ ಸೂಕ್ತ ವರದಿಯನ್ನು ಸಲ್ಲಿಸಿದೆ.

Edited By : Abhishek Kamoji
Kshetra Samachara

Kshetra Samachara

17/09/2022 05:37 pm

Cinque Terre

3.39 K

Cinque Terre

0

ಸಂಬಂಧಿತ ಸುದ್ದಿ