ಬಂಟ್ವಾಳ : ಬಂಟ್ವಾಳ ತಾಲೂಕಿನಾದ್ಯಂತ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಸರಳ ರೀತಿಯಲ್ಲಿ ಆಚರಣೆ ನಡೆಯುತ್ತಿದೆ. ಶನಿವಾರದಿಂದ ಪೊಳಲಿ ಸಹಿತ ತಾಲೂಕಿನ ಎಲ್ಲಾ ದೇವಿ ದೇವಸ್ಥಾನಗಳಲ್ಲಿ ನವರಾತ್ರಿಯ ವಿಶೇಷ ಪೂಜೆಗಳು ಆರಂಭಗೊಂಡಿವೆ,
ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪೂಜೆ-ಸೇವೆಗಳು ನಡೆಯುತ್ತಿದ್ದು, ಅದಕ್ಕಾಗಿ ಭಕ್ತರಿಗೆ ಸೂಚನೆಗಳನ್ನು ನೀಡಲಾಗಿದೆ.
ತಾಲೂಕಿನ ಪ್ರಮುಖ ದೇವಿ ಕ್ಷೇತ್ರವಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈಗಾಗಲೇ ಭಕ್ತರ ಸಂಖ್ಯೆ ಹೆಚ್ಚಳಗೊಂಡಿದ್ದು, ನವರಾತ್ರಿಯ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಸಕಲ ವ್ಯವಸ್ಥೆಗಳನ್ನು ಮಾಡಿದೆ.
ನವರಾತ್ರಿ ಸಂದರ್ಭದಲ್ಲಿ ವಿಶೇಷ ಪೂಜೆ-ಸೇವೆಗಳು ನಡೆಯುತ್ತವೆ ನವರಾತ್ರಿಯ ಸಂದರ್ಭದಲ್ಲಿ ಶಾರದೋತ್ಸವಗಳು ವಿಶೇಷ ಸ್ಥಾನವನ್ನು ಪಡೆದಿದ್ದು, ಈ ಬಾರಿ ಎಲ್ಲಾ ಕಡೆಗಳಲ್ಲಿ ಮೆರವಣಿಗೆಗಳು ಇಲ್ಲದೆ ಸರಳ ರೀತಿಯಲ್ಲಿ ಶಾರದೋತ್ಸವ ನಡೆಯಲಿದೆ.
Kshetra Samachara
19/10/2020 04:06 pm