ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಬಂಟ್ವಾಳ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹಿಳೆಯರನ್ನು ನೆನಪಿಸಿ ಕೊಳ್ಳುವಾಗ ಕಿತ್ತೂರು ರಾಣಿ ಚೆನ್ನಮ್ಮ ಅಗ್ರಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದರು. ಬ್ರಿಟಿಷರ ಸೈನ್ಯ ಎದುರಿಸುವ ಅವರ ಸಾಮರ್ಥ್ಯ, ದೇಶ ಭಕ್ತರನ್ನು ಒಗ್ಗೂಡಿಸಿ ರಾಷ್ಟ್ರ ಉಳಿಸಲು ಹೋರಾಡಿದ ರೀತಿ ಎಲ್ಲರಿಗೂ ಆದರ್ಶ ಎಂದರು.

ಈ ಸಂದರ್ಭ ಉಪತಹಸೀಲ್ದಾರ್ ರವಿಶಂಕರ್, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು. ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಸ್ವಾಗತಿಸಿ, ವಂದಿಸಿದರು.

Edited By : Vijay Kumar
Kshetra Samachara

Kshetra Samachara

23/10/2020 05:24 pm

Cinque Terre

3.67 K

Cinque Terre

0

ಸಂಬಂಧಿತ ಸುದ್ದಿ