ಬಂಟ್ವಾಳ: ಜನವರಿ ತಿಂಗಳಿನಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನೇತ್ರ ತಪಾಸಣೆ ಮಾಡಿದವರಿಗೆ ಅವಶ್ಯಕತೆ ಇದ್ದವರಿಗೆ ಉಚಿತವಾಗಿ ಕನ್ನಡಕ ನೀಡುವ ಕಾರ್ಯಕ್ರಮ ಪ್ರಸಾದ್ ನೇತ್ರಾಲಯ ಮಂಗಳೂರು ಸಹಯೋಗದೊಂದಿಗೆ ನಡೆಯಿತು.
ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯ ಸಂಸ್ಥಾಪಕ ಕೃಷ್ಣಪ್ರಸಾದ್ ಮಾತನಾಡಿ, ಉತ್ತಮ ಗುಣಮಟ್ಟದ ಕನ್ನಡಕ ವಿತರಿಸಲಾಗಿದೆ. ಉಚಿತವಾಗಿ ಕನ್ನಡಕ ನೀಡುವ ಯೋಜನೆ ಆರಂಭಿಸಲಾಗಿದ್ದು, ಈ ಗ್ರಾಮದಲ್ಲಿ ನಡೆಸಲಿದ್ದೇವೆ ಎಂದರು.
ಅಧ್ಯಕ್ಷತೆ ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷ ಡಾ.ಪ್ರಭಾಕರ ಭಟ್ ಮಾತನಾಡಿ, ದೃಷ್ಟಿದೋಷ ನಿವಾರಣೆ ಕಾರ್ಯ ಪ್ರಸಾದ್ ನೇತ್ರಾಲಯ ಮಂಗಳೂರು ನಮ್ಮ ಸಂಸ್ಥೆಯಲ್ಲಿ ನಡೆಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಕನ್ನಡಕ ವಿತರಿಸಲಾಯಿತು. ವಿದ್ಯಾಕೇಂದ್ರ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ ಹಾಗೂ ಪ್ರಸಾದ್ ನೇತ್ರಾಲಯದ ಪಿಆರ್ ಒ ಮಧುಕರ್ ಉಪಸ್ಥಿತರಿದ್ದರು. ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ವಂದಿಸಿದರು. ಪ್ರೌಢಶಾಲೆ ಕಲಾ ಶಿಕ್ಷಕ ಜಿನ್ನಪ್ಪ ಏಳ್ತಿಮಾರ್ ಕಾರ್ಯಕ್ರಮ ನಿರ್ವಹಿಸಿದರು.
Kshetra Samachara
23/10/2020 05:28 pm