ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರಿನಲ್ಲಿ "ಬಲೆ ತುಳು ಲಿಪಿ ಕಲ್ಪುಗ" ಕಾರ್ಯಾಗಾರಕ್ಕೆ ಚಾಲನೆ, ಸನ್ಮಾನ

ಮುಲ್ಕಿ: ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಪಡುಪಣಂಬೂರು ಗ್ರಾಪಂ, ದ.ಕ. ಜಿಲ್ಲಾ ಯುವ ಜನ ಒಕ್ಕೂಟ, ಮಾರ್ಗದರ್ಶನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ ಸಹಯೋಗದೊಂದಿಗೆ ಹಳೆಯಂಗಡಿ ತೋಕೂರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮತ್ತು ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಸಂಯುಕ್ತ ಆಶ್ರಯದಲ್ಲಿ "ಬಲೆ ತುಳು ಲಿಪಿ ಕಲ್ಪುಗ" ವಿಶೇಷ ಕಾರ್ಯಾಗಾರಕ್ಕೆ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಾಗಾರವನ್ನು ರೋಟರಿ ಕ್ಲಬ್ ಮುಲ್ಕಿ ಅಧ್ಯಕ್ಷ ಅಶೋಕ್ ಶೆಟ್ಟಿ ಉದ್ಘಾಟಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲಸಾರ್ ಮಾತನಾಡಿ, ತುಳುನಾಡಿನಲ್ಲಿ ಎಲ್ಲ ಜಾತಿ, ಮತ, ಧರ್ಮದವರು ಇದ್ದರೂ ಸಹ ತುಳುನಾಡಿನ ತಾಯಿಯ ಮಮತೆಯಿಂದ ತುಳು ಭಾಷಾಭಿಮಾನ ಉಳಿಸಿಕೊಳ್ಳಲು ತುಳು ಸಾಹಿತ್ಯ ಅಕಾಡೆಮಿಯೊಂದಿಗೆ ಧ್ವನಿಯಾದಲ್ಲಿ ಅಧಿಕೃತವಾಗಿ ತುಳು ಭಾಷೆಗೆ ಪ್ರಾದೇಶಿಕ ಮಾನ್ಯತೆ ಸಿಗುತ್ತದೆ ಎಂದರು.

ಜೈ ತುಳುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಸದಸ್ಯ ಕಿರಣ್ ತುಳುವೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ನರೇಂದ್ರ ಕೆರೆಕಾಡು, ನಾಗೇಶ್ ಕುಲಾಲ್ ತುಳು ಲಿಪಿ ಬರೆಯುವ ಮೂಲಕ ಶುಭ ಹಾರೈಸಿದರು. ಈ ಸಂದರ್ಭ ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷ ಮೋಹನ್ ದಾಸ್ , ಮಾಜಿ ಪಂ. ಸದಸ್ಯರಾದ ನಾರಾಯಣ ಸುವರ್ಣ, ಸಂತೋಷ್ ಕುಮಾರ್, ರೋಟರಿ ಕ್ಲಬ್ ಬೈಕಂಪಾಡಿ ಮಾಜಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ,ತೋಕೂರು ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನವೀನ್ ಶೆಟ್ಟಿಗಾರ್, ಡೈಜಿ ವರ್ಲ್ಡ್ ನ್ಯೂಸ್ ಚಾನೆಲ್ ನ ಅಹಮ್ಮದ್ ಬಾವ, ಸ್ಟೀವನ್, ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಗೌರವ ಅಧ್ಯಕ್ಷ ನಾರಾಯಣ ಜಿ.ಕೆ., ಮಹಿಳಾ ಕಾರ್ಯಾಧ್ಯಕ್ಷೆ ವಾಣಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ಸದಸ್ಯ ನಾಗೇಶ್ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಬೇಕಲ್ ವಂದಿಸಿದರು. ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ನಿರೂಪಿಸಿದರು.

Edited By : Vijay Kumar
Kshetra Samachara

Kshetra Samachara

25/10/2020 10:55 pm

Cinque Terre

4.28 K

Cinque Terre

0

ಸಂಬಂಧಿತ ಸುದ್ದಿ