ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಯನ್ನು ಸುರತ್ಕಲ್ ಬಂಟರ ಸಂಘಕ್ಕೆ ಮಂಗಳೂರು ನೆಹರೂ ಮೈದಾನದಲ್ಲಿ ಇಂದು ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಭರತ್ ವೈ. ಶೆಟ್ಟಿ, ವೇದವ್ಯಾಸ ಕಾಮತ್, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಕಾರ್ಯ ದರ್ಶಿ ಲೋಕಯ್ಯ ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷೆ ಬೇಬಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು
Kshetra Samachara
01/11/2020 02:36 pm