ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ, ಸನ್ಮಾನ

ಬಂಟ್ವಾಳ: ಇಂದು ನಮ್ಮ ಮಕ್ಕಳು ಕನ್ನಡ ಮಾತನಾಡದೇ ಇದ್ದರೆ, ಅವರಿಗೆ ಕೀಳರಿಮೆ ಬೆಳೆದಿದ್ದರೆ ಅದಕ್ಕೆ ನಾವೇ ಕಾರಣ.

ಪ್ರಕೃತಿ ಹಾಗೂ ಭಾಷೆ ನಾಶವಾಗುತ್ತಿರುವ ಈ ಸನ್ನಿವೇಶದಲ್ಲಿ ಅವನ್ನು ನಾವು ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಬಿಟ್ಟುಹೋಗಬೇಕಿದ್ದರೆ ಅದನ್ನು ಉಳಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ಶಿಕ್ಷಕ ವಿಠಲ ನಾಯಕ್ ಹೇಳಿದರು.

ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಧ್ವಜಾರೋಹಣ ನೆರವೇರಿಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಮಾತನಾಡಿ, ತಾಲೂಕಿನವರೇ ಆದ ಪಂಜೆ ಮಂಗೇಶರಾವ್, ಏರ್ಯ ಲಕ್ಷ್ಮೀನಾರಾಯಣ ಆಳ್ವರಂತಹ ಅನೇಕರು ಕನ್ನಡ ಭಾಷಾ ಬೆಳವಣಿಗೆಗಾಗಿ ಶ್ರಮಿಸಿದ್ದಾರೆ ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವುದು ಇಂದಿನ ಅಗತ್ಯ ಎಂದರು.

ಜಾವೆಲಿನ್ ಎಸೆತದಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪ್ರತಿಭೆ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಅವರನ್ನು ಸನ್ಮಾನಿಸಲಾಯಿತು.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಲಿತು ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಾದ ಮಾಣಿಲ ಸರ್ಕಾರಿ ಪ್ರೌಢಶಾಲೆಯ ಅನಿರುದ್ಧ, ಕೊಯಿಲ ಸರ್ಕಾರಿ ಪ್ರೌಢಶಾಲೆಯ ಲತಾ ಎಚ್., ಶಂಭೂರು ಸರ್ಕಾರಿ ಪ್ರೌಢಶಾಲೆಯ ಪ್ರತೀಕ್ಷಾ ಎಚ್. ಎಸ್. ಅವರಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಶುಭ ಹಾರೈಸಿದರು.

ಡಿವೈಎಸ್ಪಿ ವ್ಯಾಲೆಂಟೈನ್ ಡಿಸೋಜ, ಸಿಡಿಪಿಒಗಳಾದ ಗಾಯತ್ರಿ ಕಂಬಳಿ, ಸುಧಾ ಜೋಷಿ, ಸಬ್ ರಿಜಿಸ್ಟ್ರಾರ್ ಕವಿತಾ ಉಪಸ್ಥಿತರಿದ್ದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಸ್ವಾಗತಿಸಿದರು.

ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ವಂದಿಸಿದರು. ಕಲಾವಿದ ಮಂಜು ವಿಟ್ಲ ನಿರೂಪಿಸಿದರು.

Edited By : Nirmala Aralikatti
Kshetra Samachara

Kshetra Samachara

01/11/2020 03:09 pm

Cinque Terre

2.68 K

Cinque Terre

0

ಸಂಬಂಧಿತ ಸುದ್ದಿ