ಬೆಳ್ತಂಗಡಿ: ತೋಟಗಾರಿಕೆ ಇಲಾಖೆ ರಾಜ್ಯ ವಲಯ ಮತ್ತು ಜಿ.ಪಂ. ಅನುದಾನದಲ್ಲಿ ನಿರ್ಮಾಣಗೊಂಡ ಬೆಳ್ತಂಗಡಿ ತೋಟಗಾರಿಕೆ ಇಲಾಖೆ ನೂತನ ಕಟ್ಟಡವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕೃಷಿಕರಿಗೆ ವರದಾನವಾದ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಮುತುವರ್ಜಿ ವಹಿಸಿದೆ. ತಾಲೂಕಿನಲ್ಲಿರುವ ಅನೇಕ ಸರಕಾರಿ ಇಲಾಖೆ ಕಟ್ಟಡಗಳ ಪುನಶ್ಚೇತನಕ್ಕೆ ಆದ್ಯತೆ ನೀಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಶೆಟ್ಟಿ, ದ.ಕ. ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್.ನಾಯಕ್, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
04/11/2020 10:50 pm