ಮೂಡುಬಿದಿರೆ: ವೈದ್ಯೆ ಹಾಗೂ ಲೇಖಕಿ ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕಿ ಡಾ.ವೃಂದಾ ಬೇಡೆಕರ್ ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ವೈದ್ಯೆಯಾಗಿ ಆರೋಗ್ಯ ಕ್ಷೇತ್ರಕ್ಕೆ ದುಡಿಯುತ್ತಿರುವ ಜೊತೆಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಯನ್ನು ಸ್ಮರಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸನ್ಮಾನಿಸಿದರು. ವೃಂದಾ ಅವರು ಆಳ್ವಾಸ್ ಪಿಯು ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಯೋಗೀಶ್ ಬೇಡೆಕರ್ ಅವರ ಪತ್ನಿ.
Kshetra Samachara
06/11/2020 06:41 pm