ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯಿಂದ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ, ಸನ್ಮಾನ

ಮಂಗಳೂರು: ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ. ಜಿಲ್ಲಾ ಸಮಿತಿ ವತಿಯಿಂದ 271ನೇ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ತೊಕ್ಕೊಟ್ಟಿನಲ್ಲಿ ಮಂಗಳವಾರ ನಡೆಯಿತು.

ಉಳ್ಳಾಲ ನಗರಸಭೆಯ ನೂತನ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಯು.ಪಿ. ಅಯ್ಯೂಬ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎ.ಕೆ.ಮೊಯ್ದೀನ್ ಹಾಗೂ ಕೆ.ಸೀತಾರಾಮ ಬಂಗೇರ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ. ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಶಾಫಿ ವಹಿಸಿ ಮಾತನಾಡಿದರು. ಸಾಮಾಜಿಕ ಮುಖಂಡ ಇಬ್ರಾಹಿಂ ಲಬೈಕ್, ಮಹಾವೇದಿಕೆಯ ಯುವ ಘಟಕದ ಜಿಲ್ಲಾಧ್ಯಕ್ಷ ಮಹಮ್ಮದ್ ಜಾಸಿಮ್, ಖಿದ್ಮಾ ಫೌಂಡೇಶನ್ ನಿರ್ದೇಶಕ ಅಮೀರ್ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

10/11/2020 08:58 pm

Cinque Terre

4.16 K

Cinque Terre

0

ಸಂಬಂಧಿತ ಸುದ್ದಿ