ಮಂಗಳೂರು: ಲೇಖಕ ಅಬ್ದುಲ್ ಸಲಾಂ ದೇರಳಕಟ್ಟೆ ಬರೆದ ‘ಮರೀಚಿಕೆ’ ಕೃತಿಗೆ 2018ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪ್ರದಾನ ನಡೆಯಿತು.
ಶುಕ್ರವಾರ ನಗರದ ಶಾಂತಿ ಸದನ ಪ್ರಕಾಶನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 2018ನೇ ಸಾಲಿನ ರಾಜ್ಯ ಮಟ್ಟದ ದಿ.ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಅಬ್ದುಲ್ ಸಲಾಂ ಅವರು ಈ ಪ್ರಶಸ್ತಿಯನ್ನು ಗುರುವಾರ ನಿಧನರಾದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಕೆ. ಅವರಿಗೆ ಸಮರ್ಪಿಸಿದರು. ಅಲ್ಲದೆ, ಪ್ರಶಸ್ತಿಯ ನಗದು ಮೊತ್ತ 10 ಸಾವಿರ ರೂ.ವನ್ನು ಪ್ರತಿಭಾನ್ವಿತ ವಿದ್ಯಾರ್ಥಿನಿ ಫಾತಿಮಾ ಸಾನ್ವಿ ಅವರಿಗೆ ಇದೇ ವೇಳೆ ಹಸ್ತಾಂತರಿಸಿದರು.
ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಬಹುಭಾಷಾ ಕವಿಗೋಷ್ಠಿ ನಡೆಯಿತು.
Kshetra Samachara
27/11/2020 10:33 pm