ಮುಲ್ಕಿ: ಹಳೆಯಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ ನಡೆಯಿತು.
ಪೂರ್ವಹ್ನ ಪ್ರಾತಃ ಬಲಿ, ಪೂಜೆ ಕಲಶಾಭಿಷೇಕ, ತುಲಾಭಾರ ಸೇವೆ, ಬ್ರಹ್ಮಚಾರಿ ಆರಾಧನೆ, ಬೆಳಗ್ಗೆ 10 ಗಂಟೆಗೆ ಮಹಾಪೂಜೆ ನಡೆಯಿತು.
ಬಳಿಕ ಶ್ರೀ ದೇವರ ಉತ್ಸವ ಬಲಿ, ಪಲ್ಲಪೂಜೆ ಹಾಗೂ ಮಹಾ ಅನ್ನ ಸಂತರ್ಪಣೆ ಜರುಗಿತು. ಸಂಜೆ ಶ್ರೀ ದೇವರಿಗೆ ರಂಗಪೂಜೆ, ಉತ್ಸವ ಬಲಿ, ಶ್ರೀ ಅಣ್ಣಪ್ಪಸ್ವಾಮಿಯ ಭೇಟಿ, ಅವಭೃತೋತ್ಸವ, ಧ್ವಜಾವರೋಹಣ, ಸಂಪ್ರೋಕ್ಷಣೆ, ಮಂತ್ರಾಕ್ಷತೆ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆ, ಭಂಡಾರವನ್ನು ಮೂಲಸ್ಥಾನಕ್ಕೆ ಸೇರಿಸುವ ಕಾರ್ಯಕ್ರಮ ನಡೆಯಿತು. ಚಂಪಾ ಷಷ್ಠಿ ಪ್ರಯುಕ್ತ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ವತಿಯಿಂದ ಯಕ್ಷಗಾನ ಬಯಲಾಟ ನಡೆಯಿತು.
ದೇವಳದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಧರ್ಮದರ್ಶಿ ಡಾ. ಯಾಜಿ ನಿರಂಜನ್ ಭಟ್ ಮತ್ತು ಆಡಳಿತ ಮಂಡಳಿ ಸದಸ್ಯರು, ವಿನೋದ್ ಸಾಲ್ಯಾನ್ ಬೆಳ್ಳಾಯರು, ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
20/12/2020 09:59 pm