ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ನಾಳೆ ಪ್ರತಿಷ್ಠಾ ವರ್ಧಂತ್ಯುತ್ಸವ; ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಹಸಿರು ಕಾಣಿಕೆ ಸಮರ್ಪಣೆ

ಕಡಬ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಡಿ.22ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ.

ಆ ಪ್ರಯುಕ್ತ ಇಂದು ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಪ್ತಸಾದ ನಡೆಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನ ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಬಿಢೆ ಕೆರೆತೋಟ, ಉತ್ಸವ ಸಮಿತಿ ಅಧ್ಯಕ್ಷ ದುಗ್ಗಣ್ಣ ಗೌಡ ಹೊಸಮನೆ ಸಹಿತ ಪರಿಚಾರಕ ವರ್ಗ, ಆಡಳಿತ ಸಮಿತಿ, ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

22/12/2020 06:49 pm

Cinque Terre

2.97 K

Cinque Terre

0

ಸಂಬಂಧಿತ ಸುದ್ದಿ