ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಡಿ. 25ರಂದು ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಗೆ 'ಕನ್ನಡದ ಕಲ್ಹಣ ನೀರ್ಪಾಜೆ' ಪ್ರಶಸ್ತಿ ಪ್ರದಾನ

ಬಂಟ್ವಾಳ: ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ, ಬಂಟ್ವಾಳ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ವತಿಯಿಂದ ಡಿ.25ರಂದು ಮಧ್ಯಾಹ್ನ 3ಕ್ಕೆ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ 'ಕನ್ನಡದ ಕಲ್ಹಣ ನೀರ್ಪಾಜೆ' ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ, ಅರ್ಥಧಾರಿ ಮತ್ತು ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ನೀಡಿ ಗೌರವಿಸಲಾಗುವುದು.

ಇದೇ ವೇಳೆ ನೀರ್ಪಾಜೆ ಭೀಮ ಭಟ್ಟ ಸಂಸ್ಮರಣೆ ನಡೆಯಲಿದ್ದು, ಬಳಿಕ ಎಂ.ಗೋಪಾಲಕೃಷ್ಣ ಭಟ್ಟರ ಕೃತಿ ಸ್ವಗತ ಮತ್ತು ಇತರ ಬರಹಗಳು ಹಾಗೂ ದಿ. ಮುಳಿಯ ತಿಮ್ಮಪ್ಪಯ್ಯನವರ ಪಶ್ಚಾತ್ತಾಪದ ಹವಿಗನ್ನಡ ರೂಪಾಂತರ ಕೃತಿಗಳು ಹಾಗೂ ರೇಶ್ಮಾ ಭಟ್ ಅವರ ಕಥಾಸಂಕಲನ ಕಥಾ ವ್ಯವಕಲನ ಬಿಡುಗಡೆಗೊಳ್ಳಲಿವೆ ಎಂದು ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ ಜೈನ್, ಕೋಶಾಧಿಕಾರಿ ಎಸ್.ಗಂಗಾಧರ ಭಟ್, ಕಸಾಪ ಬಂಟ್ವಾಳ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ತಿಳಿಸಿದ್ದಾರೆ.

ಸುಬ್ರಾಯ ಭಟ್ ನೆಕ್ಕರೆಕಳೆಯ ನೀರ್ಪಾಜೆ ಸಂಸ್ಮರಣೆ ಮಾಡುವರು. ಡಾ. ಜೋಶಿಯವರನ್ನು ಹಿರಿಯ ಅರ್ಥಧಾರಿ ಜಬ್ಬಾರ್ ಸಮೋ ಅಭಿನಂದಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ವಹಿಸುವರು. ಹಿರಿಯ ಅರ್ಥಧಾರಿ ಉಜಿರೆ ಅಶೋಕ ಭಟ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಅಜಕ್ಕಳ ಗಿರೀಶ ಭಟ್ಟ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಗೌರವ ಅತಿಥಿಗಳಾಗಿ ಭಾಗವಹಿಸುವರು ಎಂದರು.

Edited By : Nagaraj Tulugeri
Kshetra Samachara

Kshetra Samachara

23/12/2020 07:59 pm

Cinque Terre

5 K

Cinque Terre

0

ಸಂಬಂಧಿತ ಸುದ್ದಿ