ಬಂಟ್ವಾಳ: ಹಿದಾಯ ಫೌಂಡೇಶನ್ ಮಂಗಳೂರು ವತಿಯಿಂದ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿರುವ ಹಿದಾಯ ಶೇರ್ ಎಂಡ್ ಕೇರ್ ಕಾಲೋನಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ಕೆ. ಇವರ ಸನ್ಮಾನ ಮತ್ತು ಹಿದಾಯ ಶೇರ್ ಎಂಡ್ ಕೇರ್ ಕಾಲೋನಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ ಅಭಿನಂದಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಡಾ. ಗೀತಪ್ರಕಾಶ್, ಸನ್ಮಾನ ಸ್ವೀಕರಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ಕೆ.ಅಭಿಪ್ರಾಯ ವ್ಯಕ್ತಪಡಿಸಿದರು, ಹಿದಾಯ ಫೌಂಡೇಶನ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.
ಬಿ. ಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ, ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿ ಆಶಿಕಾ ಮಾತನಾಡಿದರು. ಉದ್ಯಮಿಗಳಾದ ಆಶಿಫ್ ಕರ್ನಿರೆ, ಶೌಕತ್, ಶರೀಫ್ ವೈಟ್ಸ್ಟೋನ್, ಅಬೂಬಕ್ಕರ್ ಸಿದ್ದಿಕ್, ಸಂಸ್ಥೆಯ ಕೋಶಾಧಿಕಾರಿ ಝಿಯಾವುದ್ದೀನ್ ಉಪಸ್ಥಿತರಿದ್ದರು. ಹಿದಾಯ ಫೌಂಡೇಶನ್ನ ಅಬ್ದುಲ್ ರಜಾಕ್ ಅನಂತಾಡಿ ಸ್ವಾಗತಿಸಿ, ಆದಿದ್ ಅಸ್ಕರ್ ವಂದಿಸಿದರು. ಬಿ. ಮಹಮ್ಮದ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.
Kshetra Samachara
20/10/2020 07:57 pm