ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ವಾಲ್ಪಾಡಿ ಶಾಲಾ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕ ವಿತರಣೆ

ವಾಲ್ಪಾಡಿ ಗ್ರಾ.ಪಂ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಡದಂಗಡಿ ಇಲ್ಲಿನ 25 ವಿದ್ಯಾರ್ಥಿಗಳಿಗೆ ಇಬ್ಬರು ದಾನಿಗಳು ಉಚಿತವಾಗಿ ನೀಡಿರುವ ಕೊಡೆ ಮತ್ತು ಬರೆಯುವ ಪುಸ್ತಕವನ್ನು ಬುಧವಾರ ವಿತರಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಂಚಾಯತ್ನ ಮಾಜಿ ಸದಸ್ಯ ಲಕ್ಷ್ಮಣ್ ಸುವರ್ಣ ಮಾತನಾಡಿ ಉತ್ತಮ ಶಿಕ್ಷಣದೊಂದಿಗೆ ಈ ಶಾಲೆ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ ಆದರೆ ಮಕ್ಕಳ ಸಂಖ್ಯೆ ಕಡಿಮೆ ಇದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುವ ನಿಟ್ಟಿನಲ್ಲಿ ಪರಿಸರದಲ್ಲಿರುವ ಹೆತ್ತವರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸದೆ ಈ ಶಾಲೆಗೆ ಸೇರಿಸಬೇಕಾಗಿದೆ ಎಂದ ಅವರು ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಸಾಧನೆ ಉತ್ತುಂಗಕ್ಕೇರಲಿ ಎಂದು ಶುಭ ಹಾರೈಸಿದರು.

ವಾಲ್ಪಾಡಿ ಗ್ರಾ.ಪಂ ಸದಸ್ಯ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರಾ, ದಾನಿಗಳಾದ ಶಶಿಧರ್ ದೇವಾಡಿಗ, ಅಬೂಬಕ್ಕರ್, ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ವಾಣಿಶ್ರೀ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕಿ ರಶ್ಮಿ ವಂದಿಸಿದರು.

Edited By :
Kshetra Samachara

Kshetra Samachara

26/05/2022 02:58 pm

Cinque Terre

4.85 K

Cinque Terre

1

ಸಂಬಂಧಿತ ಸುದ್ದಿ