ಮಂಗಳೂರು: ದಿ.ಇಬ್ರಾಹಿಂ ತಣ್ಣಿರುಬಾವಿ ಅವರ ಸ್ಮರಣಾರ್ಥ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗೆ ಈ ಸಾಲಿನಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಭಾಜನರಾಗಿದ್ದಾರೆ.
ಪ್ರಶಸ್ತಿಯು ಪ್ರಶಸ್ತಿಯು 25,000 ರೂ.ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಯನ್ನು ಅಕ್ಟೋಬರ್7ರಂದು ಬೆಂಗಳೂರಿನ ಕಲಾ ಗ್ರಾಮದಲ್ಲಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವವರು ಉಪಸ್ಥಿತರಿರುವರು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
Kshetra Samachara
25/09/2020 06:35 pm