ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆಯ ಕಚೇರಿ ಉದ್ಘಾಟನೆ ಮತ್ತು ವಾರ್ಷಿಕ ಮಹಾಸಭೆ ಮುನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಸಕ ಯು.ಟಿ.ಖಾದರ್ ಉಳ್ಳಾಲ ಸ್ಥಳೀಯ ಸಂಸ್ಥೆಯ ಕಚೇರಿ ಉದ್ಘಾಟಿಸಿದರು. ಇದೇ ವೇಳೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೋಟೆಪುರ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಎಂ.ಎಚ್. ಮಲಾರ್, ಮಲಾರ್ ದ.ಕ. ಜಿಪಂ ಹಿ. ಪ್ರಾ. ಶಾಲೆಯ ಶಿಕ್ಷಕ ರಾಧಾಕೃಷ್ಣ ರಾವ್ ಟಿ.ಡಿ., ಮತ್ತು ತಲಪಾಡಿ ನಾರ್ಲ ಪಡೀಲ್ ಹಿ.ಪ್ರಾ. ಶಾಲೆಯ ಶಿಕ್ಷಕಿ ಇಂದಿರಾ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆಯ ಜೊತೆ ಕಾರ್ಯದರ್ಶಿ ಪ್ರತೀಪ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ತಾಪಂ ಅಧ್ಯಕ್ಷ ಮೊಹಮ್ಮದ್ ಮೋನು, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕ್ಷೇತ್ರ ಸಮನ್ವಯ ಅಧಿಕಾರಿ ಪ್ರಶಾಂತ್ ಕುಮಾರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ಎಂ.ಜಿ. ಕಜೆ, ಜಿಲ್ಲಾ ಸಂಸ್ಥೆ ಪ್ರಧಾನ ಆಯುಕ್ತ ಎನ್.ಜಿ. ಮೋಹನ್, ಜಿಲ್ಲಾ ಆಯುಕ್ತ ರಾಮ ಶೇಷ ಶೆಟ್ಟಿ, ಜಿಪಂ ಸದಸ್ಯೆ ಮಮತಾ ಗಟ್ಟಿ, ಮಂಗಳೂರು ತಾಪಂ ಸದಸ್ಯರಾದ ವಿಲ್ಮಾ ಆಲ್ಫ್ರೆಡ್ ಡಿಸೋಜ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕ ಭರತ್ ರಾಜ್, ಜಿಲ್ಲಾ ತರಬೇತಿ ಕೌನ್ಸಿಲರ್ ತ್ಯಾಗಂ ಹರೇಕಳ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ಮುನ್ನೂರು ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯಿನಿ ಶಾರದಾ, ಕಚೇರಿ ಮ್ಯಾನೇಜರ್ ಭಾಸ್ಕರ್, ಉಳ್ಳಾಲ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ ಉಪಸ್ಥಿತರಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಅಬ್ದುಲ್ ಮಜೀದ್ ಪ್ರಾಸ್ತಾವಿಕ ಮಾತನಾಡಿದರು. ಲೀಡಿಯಾ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್ ವಂದಿಸಿದರು.
Kshetra Samachara
20/09/2020 01:19 pm