ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನವನ್ನು ಶುಕ್ರವಾರ ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಹೂವುಗಳಿಂದ ಸಿಂಗರಿಸಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಮಾಜ ಬಾಂಧವರಿಂದ ಶ್ರೀ ವಿಷ್ಣು ಸಹಸ್ರನಾಮ ಪಠಣ, ನಿರ್ಮಲ್ಯ ವಿಸರ್ಜನೆ ಪೂಜೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪೂಜೆ, ಸಂಜೆ ನದಿ ತೀರದಲ್ಲಿ ಗಂಗಾ ಪೂಜನೆ, ಗಂಗಾ ಮಾತೆಗೆ ಬಾಗಿನ ಅರ್ಪಣೆ, ಗಂಗಾರತಿ, ಪ್ರಸಾದ ವಿತರಣೆ, ಸಂಜೆ ದೀಪ ನಮಸ್ಕಾರ ಪೂಜೆ ನಡೆಯಿತು. ಸರಕಾರದ ನಿಯಮದಂತೆ ಕೋವಿಡ್ ನಿಯಮ ಪಾಲಿಸಿಕೊಂಡು ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತಾದಿಗಳು ಪಾಲ್ಗೊಂಡಿದ್ದರು.
Kshetra Samachara
26/12/2020 11:32 am