ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಪಂ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್, ಕೋವಿಡ್-19 ವೇಳೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು, ಕೊರೊನಾ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಈ ಸಂದರ್ಭ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ 2018ರ ಜನವರಿಯಲ್ಲಿ ಕಾಲು ಜಾರಿ ನದಿಯಲ್ಲಿ ಮೃತಪಟ್ಟ ಒಂದೇ ಕುಟುಂಬದ ಇಬ್ಬರು ಮಕ್ಕಳ ಪೋಷಕರಿಗೆ 1 ಲಕ್ಷ ರೂ.ನ ಚೆಕ್ ನ್ನು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಸ್ತಾಂತರಿಸಿದರು.
ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ತಾಪಂ ಅಧ್ಯಕ್ಷ ಮೊಹಮ್ಮದ್ ಮೋನು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ, ಜಿಲ್ಲಾ ನಿರೂಪಣಾಧಿಕಾರಿ ಶ್ಯಾಮಲಾ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/01/2021 11:30 pm