ಮುಲ್ಕಿ: ಹಳೆಯಂಗಡಿ ಸಮೀಪದ ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೆಮ್ರಾಲ್ ಗ್ರಾಪಂ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ ಸಪ್ತಾಹ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಹರು ಯುವ ಕೇಂದ್ರದ ತಾಲೂಕು ಪ್ರತಿನಿಧಿ ಪ್ರೀತೇಶ್ ಅವರು ರಾಷ್ಟ್ರೀಯತೆಯಲ್ಲಿ ಯುವಜನರ ಪಾತ್ರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಅಧ್ಯಕ್ಷತೆಯನ್ನು ವಹಿಸಿ ಚೇಳಾಯರು ಸರಕಾರಿ ಪ.ಪೂ.ಕಾಲೇಜು ಪ್ರಾಂಶುಪಾಲ ಜಯಾನಂದ ಸುವರ್ಣ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನದ ಆದರ್ಶದ ಬಗ್ಗೆ ತಿಳಿಸಿದರು.
ಶ್ರೀ ಕೋರ್ದಬ್ಬು ದೈವಸ್ಥಾನದ ಗುರಿಕಾರ ಸತೀಶ್ ಜಿ. ಅಮೀನ್, ಮಂಡಳಿ ಗೌರವಾಧ್ಯಕ್ಷರ ಧನಂಜಯ ಪಿ. ಶೆಟ್ಟಿಗಾರ್, ಅಧ್ಯಕ್ಷ ಯಜ್ಞೇಶ್ ಪಿ. ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ ಸ್ವಾಗತಿಸಿದರು. ಮಂಡಳಿ ಪ್ರಧಾನ ಕಾರ್ಯದರ್ಶಿ ಧನು ಅಂಚನ್ ವಂದಿಸಿದರು.
Kshetra Samachara
14/01/2021 11:36 am